ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಅವರ ಗಡಿಪಾರು ವಿಷಯಕ್ಕೆ ಸಂಬಂಧಿಸಿದಂತೆ ಯೂ ಟ್ಯೂಬ್ ನಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ ಜಯಂತ್ ಟಿ. ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ.
ಜಯಂತ್ ಟಿ.ರವರು ಸತ್ಯಾಸತ್ಯತೆ ತಿಳಿದಿದ್ದರೂ ಅಪೂರ್ಣವಾದ ಮಾಹಿತಿಯೊಂದಿಗೆ ಪೊಲೀಸ್ ಉಪಾಧಿಕ್ಷಕರು ಬಂಟ್ವಾಳ ರವರು ನಿಯಮನುಸಾರ ಕಾನೂನಾತ್ಮಕವಾಗಿ ಮಹೇಶ್ ಶೆಟ್ಟಿ ತಿಮರೋಡಿಯವರ ವಿರುದ್ಧ ಸಹಾಯಕ ಆಯುಕ್ತರು ಪುತ್ತೂರುರವರಿಗೆ ಗಡಿಪಾರು ಪ್ರಸ್ತಾವನೆಯನ್ನು ಸಲ್ಲಿಸಿರುವುದನ್ನು ಸೌಜನ್ಯ ಪರ ಹೋರಾಟಕ್ಕೆ ತೊಂದರೆ ಮಾಡುತ್ತಿದ್ದಾರೆ ಎಂಬಂತೆ ಬಿಂಬಿಸಿ ಸಂಬಂಧ ಕಲ್ಪಿಸಿ, ಇದೊಂದು ಷಡ್ಯಂತ್ರ ಎಂದು ಯೂಟ್ಯೂಬ್ ನ ಲ್ಲಿ ಸುಳ್ಳು ಸುದ್ದಿಯನ್ನು ಹರಿಬಿಟ್ಟಿದ್ದು ಈ ಬಗ್ಗೆ ದಿನಾಂಕ 14/10/2025 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 118/2025 ಕಲಂ: 353(1)(b) ಬಿಎನ್ ಎಸ್ ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.