ತಣ್ಣೀರುಪಂತ: ಶ್ರೀ ನಾರಾಯಣ ಗುರು ಸಂಘದ ಸೇವಾ ಚಟುವಟಿಕೆ ಪ್ರಯುಕ್ತ ಮಂಗಳೂರು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಡಾ.ಪಿ. ದಯಾನಂದ ಪೈ ಮತ್ತು ಸತೀಶ್ ಪೈ ರಿ ಟೇಬಲ್ ಟ್ರಸ್ಟ್, ಬೆಂಗಳೂರು ಸೆಂಚುರಿ ಗ್ರೂಪ್ ಮತ್ತು ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಅ. 19ರಂದು ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಗರಡಿ ಬ್ರಹ್ಮ ಬೈದರ್ಕಳ ಅಧ್ಯಕ್ಷ ಸುನಿಲ್ ಜೈನ್ ಅಗರಿ ನಡೆಸಲಿದ್ದಾರೆ. ಅಧ್ಯಕ್ಷತೆಯನ್ನು ತಣ್ಣೀರುಪಂತ ಶ್ರೀ ಗುರು ನಾರಾಯಣ ಸೇವಾ ಸಂಘದ ಅಧ್ಯಕ್ಷ ಯೋಗೀಶ್ ಅಳಕ್ಕೆ ವಹಿಸಲಿದ್ದಾರೆ. ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆಯುವಂತೆ ಶ್ರೀ ಗುರು ನಾರಾಯಣ ಸೇವಾ ಸಂಘದವರು ತಿಳಿಸಿದ್ದಾರೆ.