ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ, ಸಮೀರ್ ಎಂ.ಡಿ ವಿರುದ್ಧ ತನಿಖೆ ಕೋರಿ ಹೈಕೋರ್ಟ್‌ಗೆ ಅರ್ಜಿ-ನೊಟೀಸ್ ಜಾರಿ

0

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ನಡೆಸಲಾಗುತ್ತಿರುವ ವ್ಯವಸ್ಥಿತ ಷಡ್ಯಂತ್ರದ ಕುರಿತು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಹಾಗೂ ಎಂ.ಡಿ. ಸಮೀರ್ ಮತ್ತಿತರರ ಚಲನವಲನ, ಚಟುವಟಿಕೆಗಳು, ಹಣಕಾಸಿನ ಮೂಲ ಮತ್ತು ಅವರ ಸಂಪರ್ಕ ಜಾಲಗಳ ಬಗ್ಗೆ ಸಮಗ್ರ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ವಿಶೇಷ ತನಿಖಾ ತಂಡ ಹಾಗೂ ಇತರರಿಗೆ ತಾವು ೨೦೨೫ರ ಆ.೨೦, ಸೆ. ೫,೮ ಮತ್ತು ೯ರಂದು ಸಲ್ಲಿಸಿರುವ ಮನವಿ ಮತ್ತು ದೂರುಗಳನ್ನು ಪರಿಗಣಿಸಲು ನಿರ್ದೇಶನ ನೀಡುವಂತೆ ಕೋರಿ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತರಾದ ಬೆಂಗಳೂರು ನಿವಾಸಿ ತೇಜಸ್ ಎ. ಗೌಡ, ಬೆಳ್ತಂಗಡಿಯ ಉಜಿರೆ ನಿವಾಸಿ ಭಾಸ್ಕರ್ ಬಡೆಕೊಟ್ಟು, ಧರ್ಮಸ್ಥಳ ನಿವಾಸಿಗಳಾದ ಸುರೇಂದ್ರ ಪ್ರಭು ಹಾಗೂ ಧನಕೀರ್ತಿ ಅರಿಗ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ನಡೆದಿದೆ.

ಈ ವೇಳೆ ನ್ಯಾಯಮೂರ್ತಿಗಳು ಪ್ರತಿವಾದಿಗಳಾದ ರಾಜ್ಯ ಸರಕಾರದ ಗೃಹ ಇಲಾಖೆ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಎಸ್.ಐ.ಟಿ., ಆದಾಯ ತೆರಿಗೆ ಮಂಗಳೂರು ಕೇಂದ್ರ ವಲಯ ಅಧಿಕಾರಿ ಮತ್ತು ಜಾರಿ ನಿರ್ದೇಶನಾಲಯದ ಮಂಗಳೂರು ಉಪ ವಲಯ ಕಚೇರಿಯ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿ ಮುಂದಿನ ವಿಚಾರಣೆಯನ್ನು ಅ.೧೬ಕ್ಕೆ ಮುಂದೂಡಿದ್ದಾರೆ.

ದೂರಿನ ವಿವರ: ತೇಜಸ್ ಎ ಗೌಡ ಅವರು ಎಸ್‌ಐಟಿಗೆ ನೀಡಿದ್ದ ದೂರಿನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಸೌಜನ್ಯ ಹೆಸರಲ್ಲಿ ಹೋರಾಟ ಮಾಡುತ್ತಿದ್ದಾರೆ. ಆ ಹೋರಾಟಕ್ಕೆ ವಕೀಲರಿಗೆ ಲಕ್ಷಾಂತರ ರೂಪಾಯಿ ಖರ್ಚಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಜೊತೆಗೆ ಈ ಹೋರಾಟದಲ್ಲಿ ತೊಡಗಿಸಿಕೊಂಡ ಸೌಜನ್ಯ ತಾಯಿ ಸೇರಿದಂತೆ ಪ್ರತಿಯೊಬ್ಬರು ಹೋರಾಟದ ಸಮಯದಲ್ಲಿ ಕೋಟಿಗಟ್ಟಲೆ ಬೆಲೆ ಬಾಳುವ ಆಸ್ತಿ ಖರೀದಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ವರದಿ ಮಾಡಲು ದುಡ್ಡನ್ನು ಪಡೆದಿದ್ದು ಅವರ ವರದಿಗಳು ಪೇಡ್ ಪ್ರಮೋಷನ್ ರೀತಿ ಎಲ್ಲೆಡೆ ಪ್ರಚಾರಗೊಂಡಿದೆ. ಇದಕ್ಕೆ ಬೇಕಾದ ಸಂಪನ್ಮೂಲಗಳನ್ನು ಮಹೇಶ್ ಶೆಟ್ಟಿ ಮತ್ತು ಇತರರು ಎಲ್ಲಿಂದ ಹೊಂದಿಸಿಕೊಂಡರು ಎಂದು ತನಿಖೆ ಮಾಡಬೇಕು ಎಂದು ಒತ್ತಾಯಿಸಿದ್ದರು.

ದನಕೀರ್ತಿ ಅವರು ತಮ್ಮ ದೂರಿನಲ್ಲಿ ಯೂಟ್ಯೂಬರ್ ಕುಡ್ಲ ರಾಂಪೇಜ್ ಎನ್ನುವವರು ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿರಂತರವಾಗಿ ಷಡ್ಯಂತ್ರಪೂರಿತ ವರದಿಗಳನ್ನು ಪ್ರಸಾರ ಮಾಡುತ್ತಿದ್ದು ಅದಕ್ಕೆ ಯಾವುದು ಮೂಲ ಎಂದು ತನಿಖೆ ಮಾಡಬೇಕು ಹಾಗೂ ಎಸ್‌ಐಟಿ ತನಿಖೆ ಸಮಯದಲ್ಲಿ ದಿನನಿತ್ಯ ತನ್ನದೇ ತನಿಖಾ ವರದಿಯನ್ನು ಎಸ್‌ಐಟಿಯ ತನಿಖಾ ವರದಿ ಎಂಬ ರೀತಿಯಲ್ಲಿ ಬಿಂಬಿಸಿ ಪ್ರಸಾರ ಮಾಡುತ್ತಿದ್ದರು. ಈ ರೀತಿ ಪ್ರಸಾರ ಮಾಡಲು ಅವರಿಗೆ ವರದಿಯ ಮೂಲ ಯಾವುದು. ಅವರು ಎಸ್‌ಐಟಿಯಿಂದ ಮತ್ತು ಎಸ್‌ಐಟಿಯ ಯಾವ ಮೂಲದಿಂದ ಈ ಮಾಹಿತಿಗಳನ್ನು ಪಡೆಯಲು ಸಾಧ್ಯವಾಯಿತು ಎಂದು ತಿಳಿಸುವಂತೆ ಕೋರಿದ್ದರು. ವಿಠಲ ಗೌಡ ಎನ್ನುವವರು ಹಿಂದೆ ಹೋಟೆಲು ನಡೆಸುತ್ತಿರುವಾಗ ಜೊತೆಯಲ್ಲಿ ಕೆಲಸ ಮಾಡುವ ಕಾರ್ಮಿಕನನ್ನು ದಾರುಣವಾಗಿ ಕೊಲೆ ಮಾಡಿದ್ದು ಆ ಕೇಸ್ ಮುಚ್ಚಿ ಹಾಕಲಾಗಿದೆ. ಅದಕ್ಕೆ ಸಂಬಂಧಿಸಿದ ಕೆಲವು ದಾಖಲಾತಿಗಳನ್ನು ಸಲ್ಲಿಸಿzನೆ. ಇದರ ಬಗ್ಗೆ ಕೂಲಂಕುಶವಾಗಿ ತನಿಖೆ ಮಾಡಬೇಕು ಎಂದು ಕೋರಿದ್ದರು.

LEAVE A REPLY

Please enter your comment!
Please enter your name here