ಉಜಿರೆ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳ್ತಂಗಡಿ ಪಶು ಸಂಗೋಪನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ವತಿಯಿಂದ ಉಜಿರೆ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಉಜಿರೆ ಪಂಚಾಯತ್ ವ್ಯಾಪ್ತಿಯ ಲ್ಲಿ ಸಾಕು ನಾಯಿ ಗಳಿಗೆ ಮತ್ತು ಬೆಕ್ಕುಗಳಿಗೆ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಶಿಬಿರಆ ಅ. 17ರಂದು ಜರಗಿತು.

ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಶಿಬಿರಕ್ಕೆ ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ಚಾಲನೆ ನೀಡಿದರು. ತಾಲೂಕು ಪಶು ವೈದ್ಯಾಧಿಕಾರಿ ರವಿ ಕುಮಾರ್, ಉಜಿರೆ ಪಶು ವೈದ್ಯ ಸಚಿನ್, ಗ್ರಾಮ ಪಂಚಾಯತ್ ಸದಸ್ಯೆ ಶಶಿಕಲಾ, ಪಂಚಾಯತ್ ಸಿಬ್ಬಂದಿ, ಪಶು ಸಖಿ ಉಪಸ್ಥಿತರಿದ್ದರು. ಬಳಿಕ ಪಂಚಾಯತ್ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಸಾಕುನಾಯಿ ಹಾಗೂ ಬೆಕ್ಕುಗಳಿಗೆ ಉಚಿತವಾಗಿ ರೇಬಿಸ್ ಲಸಿಕೆ ನೀಡಲಾಯಿತು.