ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಅ.19ರಂದು ಹಿರಿಯ ವಿದ್ಯಾರ್ಥಿಗಳನ್ನು ಒಟ್ಟು ಸೇರಿಸುವುದಕ್ಕಾಗಿ ಅನುಗ್ರಹ ಸಮಾಗಮ ಕಾರ್ಯಕ್ರಮವನ್ನು ಅನುಗ್ರಹ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಚಾಲಕ ಫಾ. ಅಬೆಲ್ ಲೋಬೊ ಅವರು ವಹಿಸಿಕೊಳ್ಳಲಿರುವರು. ಉದ್ಘಾಟಕರಾಗಿ ಶಿಕ್ಷಣ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಹಾಗೂ ಉಜಿರೆ ಲಕ್ಷ್ಮಿ ಜನಾರ್ಧನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡವೆಟ್ನಾಯ ಅವರು ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಆ್ಯಂಟನಿ ಫೆರ್ನಾಂಡಿಸ್ ಹಾಗೂ ಹಿರಿಯ ವಿದ್ಯಾರ್ಥಿಗಳಾದ ಜಯಪ್ರಕಾಶ್, ಡಾ. ಶಾಲ್ಮಲಿ, ಪ್ರಿತೀತ ಬಂಗೇರ, ರಂಜನ್ ಗೌಡ, ಮೋನಿಕಾ, ಅರುಣ್ ಕುಮಾರ್, ಫ್ಲ್ಯಾನಿಶಾ ಹನೀಫ್ ಅವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮವು ಬೆಳಿಗ್ಗೆ 9.30ಕ್ಕೆ ಪ್ರಾರಂಭಗೊಂಡು ನಂತರ ವಿವಿಧ ಲಕ್ಕಿಗೇಮ್ಸ್ ಗಳು ಹಾಗೂ 11 ಗಂಟೆಗೆ ಸರಿಯಾಗಿ ಸಭಾ ಕಾರ್ಯಕ್ರಮವು ನಡೆಯಲಿದೆ. ನಂತರ ಮನೋರಂಜನ ಕಾರ್ಯಕ್ರಮಗಳು ಇದ್ದು ಶುಚಿ ರುಚಿಯಾದ ಭೋಜನದ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ಆದ್ದರಿಂದ ಅನುಗ್ರಹ ಶಿಕ್ಷಣ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಪ್ರಾಂಶುಪಾಲ ಫಾ.ವಿಜಯ್ ಲೋಬೊ ಅವರು ಈ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.