Site icon Suddi Belthangady

ಹೋಲಿ ರಿಡೀಮರ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: “ಮಕ್ಕಳ ಶಕ್ತಿಯ ಪ್ರದರ್ಶನಕ್ಕೆ ಹಾಗೂ ಸಾಮರ್ಥ್ಯ ತಿಳಿದುಕೊಳ್ಳಲು ಶಾಲಾ ವಾರ್ಷಿಕ ಕ್ರೀಡಾಕೂಟವು ಸರಿಯಾದ ವೇದಿಕೆ” ಎಂದು ಗುರುಗಳು ಪೌಲ್ ಸೆಬಾಸ್ಟಿಯನ್ ಡಿ ಸೋಜಾ ಅವರು ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅ. 17ರಂದು ನಡೆದ ಶಾಲಾ ವಾರ್ಷಿಕ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ನುಡಿದರು.

“ಆಟೋಟ ಸ್ಪರ್ಧೆಗಳು ಮಕ್ಕಳಲ್ಲಿ ಶಿಸ್ತನ್ನು ಬೆಳೆಸಲು ಸಹಕಾರಿ” ಎಂದು ಶಾಲಾ ಸಂಚಾಲಕರಾದ ಅತೀ ವಂದನೀಯ ಗುರುಗಳು ವೋಲ್ಟರ್ ಡಿಮೆಲ್ಲೋರವರು ನುಡಿದು ಕ್ರೀಡಾಕೂಟಕ್ಕೆ ಆಶೀರ್ವದಿಸಿದರು.

ಶಾಲಾ ಮುಖ್ಯೋಪಾಧ್ಯಾಯ ಗುರು ಕ್ಲಿಫರ್ಡ್ ಪಿಂಟೋ ಅವರು ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.

ಕ್ರೀಡಾ ಮಂತ್ರಿಯಾದ ಅಲ್ ಸ್ಟನ್ ಡಿಸಿಲ್ವ ವಿದ್ಯಾರ್ಥಿಗಳಿಗೆ ಕ್ರೀಡಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಸಾಧನೆಗೈದ ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನು ತಂದು ಮುಖ್ಯ ಅತಿಥಿಗಳಿಗೆ ಹಸ್ತಾಂತರಿಸಿದರು.

ವೇದಿಕೆಯಲ್ಲಿ ಚರ್ಚ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ರೆನ್ನಿ ವಾಸ್, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ವಾಲ್ಟರ್ ಮೋನಿಸ್ ಹಾಗೂ ಕಾರ್ಯದರ್ಶಿ ಶ್ರೀ ಗಿಲ್ಬರ್ಟ್ ಪಿಂಟೋ, ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ರಿಚರ್ಡ್ ಸಿಕ್ವೇರಾ, ಕ್ರೀಡಾ ನಿಯಮ ಪಾಲಕ ಪ್ರಸಾದ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ವಿಭಿಷಾ ಸ್ವಾಗತಿಸಿ, ಜೆನಿಶಾ ವೇಗಸ್ ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ದೈಹಿಕ ಶಿಕ್ಷಕ ಸಂದೀಪ್ ಸಹಕರಿಸಿದರು. ಅನನ್ಯ ವಂದಿಸಿದರು.

Exit mobile version