ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ

0

ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ ನೆರವೇರಿತು. ಶಾಲಾ ಸಂಚಾಲಕ ಗುರು ಎಲಿಯಸ್ ಡಿಸೋಜಾ ಅವರು ಬೆಳಕಿನ ಹಬ್ಬದ ಮಹತ್ವ ವಿದ್ಯಾರ್ಥಿಗಳಿಗೆ ತಿಳಿಸಿದರು. ಮುಖ್ಯ ಶಿಕ್ಷಕಿ ಮೋನಿಕಾ ಡಿಸೋಜಾ ದೀಪಾವಳಿ ಹಬ್ಬದ ಆಚರಣೆಯ ಉದ್ದೇಶವನ್ನು ತಿಳಿಸಿದರು.

ವಿದ್ಯಾರ್ಥಿಗಳು ದೀಪಾವಳಿ ಹಬ್ಬದ ಆಚರಣೆಯ ನೃತ್ಯ ರೂಪಕ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಈ ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಜ್ಞಾಹ್ನವಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಪ್ರತೀಕ್ಷಾ ನಿರೂಪಿಸಿದರು. ವೈಷ್ಣವಿ ವಂದಿಸಿದರು.

LEAVE A REPLY

Please enter your comment!
Please enter your name here