Site icon Suddi Belthangady

14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ- ರಕ್ಷಿತಾ ಜೆ. ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 14ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬಂದಾರು ಸ.ಹಿ.ಉ.ಪ್ರಾ ಶಾಲೆಯ ರಕ್ಷಿತಾ ಜೆ. ಚಿನ್ನದ ಪದಕ ಪಡೆದು ನವೆಂಬರ್ ‌ನಲ್ಲಿ ಅಂಧ್ರಪ್ರದೇಶದ ಕಡಪಾದಲ್ಲಿ ನಡೆಯುವ 70ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ ಆಗಿರುತ್ತಾರೆ. ಮೊಗ್ರು ಗ್ರಾಮ ದಂಡುಗ ನಿವಾಸಿ ಶೀಲಾವತಿ ಜನಾರ್ಧನ ದಂಪತಿಗಳ ಪುತ್ರಿ. ಕ್ರೀಡಾ ಸಾಧನೆಗೆ ಶಾಲಾಭಿವೃದ್ಧಿ ಸಮಿತಿ, ಶಿಕ್ಷಕ ವೃಂದ, ವಿದ್ಯಾಭಿಮಾನಿಗಳು ಅಭಿನಂದನೆ ಸಲ್ಲಿಸಿದರು.

Exit mobile version