Site icon Suddi Belthangady

ಅರಸಿನಮಕ್ಕಿ: ಬೂಡುಮುಗೇರು ನಿವಾಸಿ ತೇಜಸ್ವಿನಿ ಶವ ಬಾವಿಯಲ್ಲಿ ಪತ್ತೆ

ಅರಸಿನಮಕ್ಕಿ : ಬೂಡುಮುಗೇರು ನಿವಾಸಿ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಕಳೆದ 2 ವರ್ಷದಿಂದ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ತೇಜಸ್ವಿನಿ (23ವ.) ಅವರ ಶವ ಬಾವಿಯಲ್ಲಿ ಪತ್ತೆಯಾದ ಪ್ರಕರಣ ಅ. 23ರಂದು ವರದಿಯಾಗಿದೆ.

ಇವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆನ್ನಲಾಗಿದ್ದು, ಕಾಲು ಜಾರಿ ಬಾವಿಗೆ ಬಿದ್ದರೇ, ಅಥವಾ ಆತ್ಮಹತ್ಯೆ ಮಾಡಿಕೊಂಡರೇ ಎಂಬುದು ಖಚಿತವಾಗಿಲ್ಲ, ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಮೃತರು ತಂದೆ, ತಾಯಿ, ಸಹೋದರಿಯರನ್ನು ಅಗಲಿದ್ದಾರೆ.

Exit mobile version