ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಆಚರಣೆ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅ. 21ರಂದು ದೀಪಾವಳಿಯನ್ನು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವು ಪ್ರಾರ್ಥನಾ ವಿಧಿಯೊಂದಿಗೆ ದೀಪ ಬೆಳಗಿಸುವುದರ ಮೂಲಕ ಪ್ರಾರಂಭವಾಯಿತು.

ವಿದ್ಯಾರ್ಥಿನಿ ಬಿಂದು ಅವರು ದೀಪಾವಳಿಯ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿನಿಯರು ನೃತ್ಯ, ನಾಟಕ ಪ್ರದರ್ಶಿಸುವ ಮೂಲಕ ಎಲ್ಲರನ್ನೂ ಮನರಂಜಿಸಿದರು. ಈ ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಸ್ವಾ| ಸ್ಟ್ಯಾನಿ ಗೋವಿಯಸ್ ಅವರು ಆಗಮಿಸಿ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ದೀಪಾವಳಿಯು ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಹಬ್ಬವಾಗಿದೆ ಎಂದು ಹೇಳಿ ಮಕ್ಕಳಿಗೆ ದೀಪಾವಳಿಯ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮದಲ್ಲಿ ಮಡಂತ್ಯಾರು ಚರ್ಚ್ ಸಹಾಯಕ ಧರ್ಮಗುರು ಸ್ವಾ| ಲ್ಯಾರಿ ಪಿಂಟೋ ಅವರು, ಶಾಲಾ ಮುಖ್ಯೋಪಾಧ್ಯಾಯ ಸ್ವಾ| ದೀಪಕ್ ಲಿಯೊ ಡೇಸರವರು, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ರವೀಂದ್ರ ರೈ ರವರು ಹಾಗೂ ಶಿಕ್ಷಕರ-ರಕ್ಷಕ ಸಂಘದ ಸದಸ್ಯ ಪ್ರವೀಣ್ ಚಂದ್ರ ಶೆಟ್ಟಿ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಪ್ರೀತಮ್ ಸ್ವಾಗತಿಸಿ, ಎಲ್ರಿಕಾ ಮತ್ತು ಆಫ್ನಾನ್ ನಿರೂಪಿಸಿದರು. ಕ್ಷಮ್ಯ ಧನ್ಯವಾದ ಸಮರ್ಪಿಸಿದರು.

LEAVE A REPLY

Please enter your comment!
Please enter your name here