ಕೊಕ್ಕಡ: ಸೌತಡ್ಕದ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಅ. 24ರಂದು ಬೆಳಗ್ಗೆ ನೆರವೇರಿತು. ಆರಂಭದಲ್ಲಿ ಸೌತಡ್ಕ ಶ್ರೀ ಮಹಾಗಣಪತಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಶಿಲಾನ್ಯಾಸ ಕಲ್ಲನ್ನು ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು.
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರದಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಅವರು ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿದ ಬಳಿಕ ಪುತ್ತೂರು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಅವರು ಶಿಲಾನ್ಯಾಸವನ್ನು ನೆರವೇರಿಸಿದರು. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಆಗಮಿಸಿ ಶುಭ ಕೋರಿದರು.
ತದ ನಂತರ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದರಾದ ಬ್ರಿಜೇಶ್ ಚೌಟ ನೆರವೇರಿಸಿ, ಶ್ರೀ ಮಹಾಗಣಪತಿ ಆಶೀರ್ವಾದದಿಂದ ಈ ಕಟ್ಟಡ ಕೆಲಸ ಶೀಘ್ರವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.
ಈ ಶಾಲೆಯ ಅಭಿವೃದ್ಧಿಗೆ ಹಾಗೂ ಎಲ್ಲ ಚಟುವಟಿಕೆಗೆ ನನ್ನ ಬೆಂಬಲ ಇದೆ. ನಾನು ನಿಮ್ಮೊಂದಿಗೆ ಇರಲಿದ್ದೇನೆ ಎಂದು ಕಟ್ಟಡ ನಿರ್ಮಾಣ ಸಮಿತಿ ಹಾಗೂ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಗೆ ಭರವಸೆ ನೀಡಿದರು. ಉಡುಪಿ, ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿದರು. ಶಾಸಕಿ ಭಾಗೀರಥಿ ಮುರುಳ್ಯ ಶುಭ ಹಾರೈಸಿದರು.
ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ, ರಾಜ್ ಬೋರ್ ವೆಲ್ಸ್ ಮಾಲಕ ಕೃಷ್ಣರಾಜ್, ಪುತ್ತೂರು ಎಸ್.ಆರ್. ಬಿಲ್ಡರ್ಸ್ ಮತ್ತು ಡೆವಲಪರ್ಸ್ ಮಾಲಕ ಶಿವಪ್ರಸಾದ್ ಇಜ್ಜಾವು, ಉದ್ಯಮಿ ಪ್ರಸಾದ್ ಕುಮಾರ್ ಶೆಟ್ಟಿ, ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಕೃಷ್ಣಭಟ್ ಹಿತ್ತಿಲು, ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ವಿವೇಕಾನಂದ ವಿದ್ಯಾ ವರ್ಧಕ ಸಂಘದ ಉಪಾಧ್ಯಕ್ಷ ಕೆ. ಸತೀಶ್ ರಾವ್, ಕಾರ್ಯದರ್ಶಿ ಕೆ.ಎಂ. ಕೃಷ್ಣ ಭಟ್, ಕಡಬ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ, ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಕಾರ್ಯದರ್ಶಿ ರಾಘವೇಂದ್ರ ನಾಯಕ್, ಕಟ್ಟಡ ಸಮಿತಿಯ ಸದಸ್ಯರಾದ ಬಾಲಕೃಷ್ಣ ನೈಮಿಷ, ಪುರಂದರ ಕಡೀರ, ಜಯರಾಮ್ ನೆಲ್ಲಿತ್ತಾಯ, ಗಣೇಶ್ ಕೆ. ಮೊದಲಾದವರು ಉಪಸ್ಥಿತರಿದ್ದರು.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ತಾಂತ್ರಿಕ ತೊಂದರೆಯಿಂದಾಗಿ ಅವರಿಗೆ ದಕ್ಷಿಣ ಕನ್ನಡಕ್ಕೆ ಬರಲು ಸಾಧ್ಯವಾಗಲಿಲ್ಲ. ಹೀಗಾಗಿ ಕಾರ್ಯಕ್ರಮಕ್ಕೆ ಗೈರಾದರು. ಕಟ್ಟಡ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಪ್ರಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ವೃಶಾಂಕ್ ಖಾಡಿಲ್ಕರ್ ಕಾರ್ಯಕ್ರಮ ನಿರೂಪಿಸಿದರು.

