




ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ಅವರು ಗೌರವಾರ್ಪಣೆಯನ್ನು ಸಲ್ಲಿಸಿದರು. ಪ್ರಮುಖರಾದ ಆಡೂರು ಮುಂಡಾಜೆ, ರಾಜು ಪೂಜಾರಿ ಕಾಶಿಪಟ್ಲ ಮತ್ತು ಸಂತೋಷ್ ಕುಮಾರ್ ಕಾಪಿನಡ್ಕ ಉಪಸ್ಥಿತರಿದ್ದರು.










