




ಅರಸಿನಮಕ್ಕಿ: ನೇಲ್ಯಡ್ಕ ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಗ್ರಾಮ ಪಂಚಾಯತ್ ನ ಜಂಟಿ ಅನುದಾನ ರೂ. 5.20ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಶೌಚಾಲಯವನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಗಾಯತ್ರಿ ಹಾಗೂ ಶಾಲಾ SDMC ಅಧ್ಯಕ್ಷ ಉದ್ಘಾಟನೆಗೊಳಿಸಿದರು. ಗ್ರಾಮ ಪಂಚಾಯತ್ ನ ಸದಸ್ಯರು, ಶಾಲಾ SDMC ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಶಾಲಾ ಮುಖ್ಯ ಗುರುಗಳು, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.










