Site icon Suddi Belthangady

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಶ್ರಮದಾನ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ – ರೇಂಜರ್ಸ ಘಟಕ ಹಾಗೂ ವಾಣಿಜ್ಯ ಸಂಘದಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಒಂದು ದಿನದ ಶ್ರಮದಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ವಿದ್ಯಾರ್ಥಿಗಳ ತಂಡ ಆಸ್ಪತ್ರೆಯ ಸುತ್ತಮುತ್ತಲಿನ ಪರಿಸರದ ಸ್ವಚ್ಛತಾ ಕೆಲಸ ಮಾಡಿ ಅಲ್ಲಿನ ಸಾರ್ವಜನಿಕರ ಪ್ರಶಂಸೆಗೆ ಕಾರಣಿಭೂತರಾದರು. ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ ವರ್ಗದವರು ಸಹ ಈ ಶಿಬಿರದಲ್ಲಿ ವಿದ್ಯಾರ್ಥಿಗಳೊಡನೆ ಕೈ ಜೋಡಿಸಿದರು. ಈ ಸ್ವಚ್ಛತಾ ಶಿಬಿರದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ. ಪದ್ಮನಾಭ ಕೆ., ವಾಣಿಜ್ಯ ಸಂಘದ ಸಂಚಾಲಕ ಪ್ರೊ. ನವೀನ್, ಯುವ ರೆಡ್ ಕ್ರಾಸ್ ಹಾಗೂ ರೇಂಜರ್ಸ್ ಘಟಕದ ಅಧಿಕಾರಿ ಡಾ. ರಾಜೇಶ್ವರಿ ಎಚ್. ಎಸ್., ಇಂಗ್ಲಿಷ್ ವಿಭಾಗದ ಪ್ರೊ. ಸುರೇಶ್ ಡಿ. ಭಾಗವಹಿಸಿದ್ದರು. ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಅವರು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆಗೆ ಉಪಸ್ಥಿತರಿದ್ದು ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Exit mobile version