



ಬೆಳ್ತಂಗಡಿ: ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಸಂಘ ಬೆಂಗಳೂರು ವತಿಯಿಂದ ಗೌರವಿಸುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿಯನ್ನು ಬೆಳಾಲು ಶ್ರೀ ಧ. ಮ. ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ರಾವ್ ಪಡೆದುಕೊಂಡಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆ ಆಗಿ ಬೆಂಗಳೂರಿನ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತ ಸಂತೋಷ್ ಹೆಗಡೆಯವರ ಸಮ್ಮುಖದಲ್ಲಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ ಸ್ವೀಕರಿಸಿದರು.









