ಪ.ಪೂ. ಕಾಲೇಜುಗಳ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

0

ಬೆಳ್ತಂಗಡಿ: ದ.ಕ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಜೈನ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ಒಟ್ಟು 28 ಚಿನ್ನ, 20 ಬೆಳ್ಳಿ ಮತ್ತು 4 ಕಂಚಿನ ಪದಕಗಳೊಂದಿಗೆ 52 ಪದಕಗಳನ್ನು ಪಡೆದು ಬಾಲಕರ ವಿಭಾಗದಲ್ಲಿ 100 ಅಂಕ ಮತ್ತು ಬಾಲಕಿಯರ ವಿಭಾಗದಲ್ಲಿ 104 ಅಂಕ ಒಟ್ಟು 204 ಅಂಕದೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆಯಿತು.

ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು 16 ಅಂಕಗಳೊಂದಿಗೆ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವಿಭಾಗದಲ್ಲಿ ಜೈನ್ ಪದವಿಪೂರ್ವ ಕಾಲೇಜು 18 ಅಂಕ ಪಡೆದು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.

ಬಾಲಕರ ವೈಯಕ್ತಿಕ ಪ್ರಶಸ್ತಿಯನ್ನು ಆಳ್ವಾಸಿನ ಸಮರ್ಥ ಪಡೆದುಕೊಂಡರೆ, ಬಾಲಕಿಯರ ವೈಯಕ್ತಿಕ ವಿಭಾಗದಲ್ಲಿ ಆಳ್ವಾಸಿನ ನಾಗಿಣಿ ಪಡೆದುಕೊಂಡರು. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಅಭಿನಂದನೆ ಸಲ್ಲಿಸಿದರು. 

LEAVE A REPLY

Please enter your comment!
Please enter your name here