ಧರ್ಮಸ್ಥಳ: ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅ.25ರಂದು ಧರ್ಮಸ್ಥಳಕ್ಕೆ ಆಗಮನಿಸಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಪಟ್ಟಾಭಿಷೇಕದ 58ನೆ ವರ್ಧಂತ್ಯುತ್ಸವದ ಸಂದರ್ಭ ಗೌರವಿಸಿ ಅಭಿನಂದಿಸಿದರು.
ಹೇಮಾವತಿ ವೀ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು. ಸ್ವಾಮೀಜಿ ಅವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

