


ಕಣಿಯೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಪಶು ಆಸ್ಪತ್ರೆ ಬೆಳ್ತಂಗಡಿ, ಕಣಿಯೂರು ಪಶು ಚಿಕಿತ್ಸಾಲಯ, ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಉಚಿತ ಹುಚ್ಚು ನಾಯಿ ಲಸಿಕಾ ಕಾರ್ಯಕ್ರಮವನ್ನು ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ ಚಾಲನೆ ನೀಡಿದರು.



ಪಶು ವೈದ್ಯಕೀಯ ಡಾ. ಸಚಿನ್, ಪಶು ಸಖಿ ದೀಪಿಕ ಕಣಿಯೂರು, ಪಂಚಾಯತ್ ಕಾರ್ಯದರ್ಶಿ ರಮೇಶ್ ಕೆ., ಪದ್ಮುಂಜ ಹಾಲು ಉತ್ಪಾದಕ ಸಂಘದ ಕಾರ್ಯದರ್ಶಿ ಸತೀಶ್ ಶೆಟ್ಟಿ ಗ್ರಾಮ ಪಂಚಾಯತ್ ಸಿಬ್ಬಂದಿ ಪ್ರದೀಪ್ ನಾಯ್ಕ ಹಾಗೂ ಗಿರಿಯಪ್ಪ ನಾಯ್ಕ ಉಪಸ್ಥಿತರಿದ್ದರು.









