




ಧರ್ಮಸ್ಥಳ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ ಮತ್ತು ಉಜಿರೆ ಎಸ್.ಡಿ.ಎಂ. ಕಾಲೇಜಿನ ಸಂಸ್ಕೃತ ವಿಭಾಗದ ಜಂಟಿ ಸಹಯೋಗದಲ್ಲಿ ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಅಭಿಯಾನ 2025ರ ಅಂಗವಾಗಿ ಎಸ್.ಡಿ.ಎಂ. ಕಾಲೇಜಿನಲ್ಲಿ ಅ.25ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ಧರ್ಮಸ್ಥಳ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ಆರಾಧ್ಯಾ ಪಿ. ಜೋಷಿ ಪ್ರಾಥಮಿಕ ವಿಭಾಗದಲ್ಲಿ, ಹಾಗೂ 10ನೇ ತರಗತಿಯ ಪೂರ್ವಿ ಭಟ್ ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.









