




ಉಜಿರೆ: ರತ್ನವರ್ಮ ಕ್ರೀಡಾಂಗಣದಲ್ಲಿ ಜರುಗಿದ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. 3000ಮೀ ಓಟದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಶ್ರೀಶ, 400 ಮೀಟರ್ ಓಟದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಶ್ರದ್ಧಾ, 1500 ಮೀಟರ್ ಓಟದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಪ್ರಪುಷ್ಯಾ, 3000 ಮೀಟರ್ ಓಟದ ನಡಿಗೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಶ್ರದ್ಧಾ, ಡಿಸ್ಕಸ್ ತ್ರೋ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಅಶುತೋಷ್, ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಕೀರ್ತಿ, ಜಾವಲಿನ್ ತ್ರೋ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಪ್ರಜ್ಞಾ, 400*400 ಮೀಟರ್ ರಿಲೆಯಲ್ಲಿ ಬಾಲಕಿಯರ ತಂಡ ಭಾಗವಹಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.









