




ಬೆಳ್ತಂಗಡಿ: ಬೆಳಿಗ್ಗೆ ಸುಲ್ಕೇರಿಯಿಂದ ನಾರಾವಿ ಕಡೆಗೆ ಸ್ಥಳೀಯ ನಿವಾಸಿ ಪೂರ್ಣೇಶ್ ಎಂಬತವರು ವಾಕಿಂಗ್ ಹೋಗುವ ಸಂದರ್ಭದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕೈ ತುಂಡಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ವೇಣೂರು ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.









