ಬೆಳ್ತಂಗಡಿ: ಸಹಕಾರ ಸಪ್ತಾಹ ನ.14ರಿಂದ ನ.20 ರವರೆಗೆ ನಡೆಯಲಿದ್ದು ಅದರ ಪೂರ್ವಭಾವಿ ಸಭೆ ಅ.29 ರಂದು ಮಡಂತ್ಯಾರು ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಿತು.
ಸಭೆಯಲ್ಲಿ ಡಿಸಿಸಿ ಬ್ಯಾಂಕ್ ನ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಮಡಂತ್ಯಾರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜೋಯಲ್ ಮೆಂಡೋನ್ಸ್, ಉಪಾಧ್ಯಕ್ಷ ಕಾಂತಪ್ಪ ಗೌಡ, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಪ್ರಭಾಕರ್ ಆರಂಬೋಡಿ, ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಸತೀಶ್ ಕಾಶಿಪಟ್ನಾ, ತಾಲೂಕು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಬ್ಯಾಂಕಿನ ಪ್ರತಿನಿಧಿಗಳು ಉಪಸ್ಥಿತರಿದ್ದರು.

