ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಕಾರ್ಯಕ್ರಮ

0

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ (POSH-Prevention of Sexual Harassment) ಕುರಿತ ಮಾಹಿತಿ ಕಾರ್ಯಕ್ರಮ ಅ.29ರಂದು ನಡೆಯಿತು.

ದ.ಕ. ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಜ್ಯೋತಿ ಉಳೆಪ್ಪಾಡಿ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು. ಪೋಕ್ಸೊ (Protection of Children from Sexual Offences Act) ಕಾಯ್ದೆ ಕುರಿತು ಕೂಡ ಅವರು ವಿವರಿಸಿದರು.

ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿ ಅಮ್ಮಿ ಎ. ಅವರು, ಕ್ಷಯರೋಗ, ಕಾಲರಾ, ಡೆಂಗ್ಯೂ, ಮಲೇರಿಯಾ ಹಾಗೂ ಕುಷ್ಠರೋಗ ಹರಡುವಿಕೆ, ಕಾರಣ ಮತ್ತು ನಿಯಂತ್ರಣ ಕುರಿತು ಮಾಹಿತಿ ನೀಡಿದರು.
ವಿದ್ಯಾರ್ಥಿನಿಯರಿಗೆ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್, ವಿದ್ಯಾರ್ಥಿ ಸಂಘದ ನಾಯಕಿ ಅಪೇಕ್ಷಾ ಉಪಸ್ಥಿತರಿದ್ದರು.
ವೀಕ್ಷಾ ಜೆ. ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here