Site icon Suddi Belthangady

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಕಾರ್ಯಗಾರ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆರನೇ ತರಗತಿ ವಿದ್ಯಾರ್ಥಿಗಳಿಗೆ “Nxplorer junior 1” ಅ.29ರಂದು ಕಾರ್ಯಗಾರ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ Learning Links Foundationನ ವ್ಯವಸ್ಥಾಪಕರಾದ ಮೊಹಮ್ಮದ್ ಶಕೀರ್, ಶಾಲಾ ಶಿಕ್ಷಕಿಯರಾದ ವೀಣಾ ಹಾಗೂ ಸ್ಮಿತಾ ಕಿಣಿ ವಿಶ್ವಸಂಸ್ಥೆಯ ಗುರಿ ಉದ್ದೇಶಗಳಲ್ಲಿ ವಿದ್ಯಾರ್ಥಿಗಳ ಪಾತ್ರ ವಿಷಯದ ಕುರಿತಾಗಿ ದೃಶ್ಯ ಮಾಧ್ಯಮ ಹಾಗೂ ಪ್ರಾತ್ಯಕ್ಷಿಕೆಯೊಂದಿಗೆ ಮಾಹಿತಿ ಹಂಚಿಕೊಂಡು ವಿದ್ಯಾರ್ಥಿಗಳಿಂದ ಕಾರ್ಯ ಯೋಜನೆ ಮಾಡಿಸಿ ಪ್ರಾಯೋಗಿಕ ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ. ಅಧ್ಯಕ್ಷತೆ ವಹಿಸಿದ್ದರು.

Exit mobile version