




ಉಜಿರೆ: ಗ್ರಾಮ ಪಂಚಾಯತ್ ನ 2025 -2026ನೇ ಸಾಲಿನ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯಲ್ಲಿ ಬೆಳ್ತಂಗಡಿ ರಾಜ ಕೇಸರಿ ಸೇವಾ ಟ್ರಸ್ಟ್ ವತಿಯಿಂದ ಕರ್ನಾಟಕ ರಾಜ ಕೇಸರಿ ಸೇವಾ ಟ್ರಸ್ಟ್ ನ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿ ಅವರ ನೇತೃತ್ವದಲ್ಲಿ 581ನೇ ಯ ಸೇವಾ ಯೋಜನೆ ಅಡಿಯಲ್ಲಿ ಉಜಿರೆಯ ವಿಶೇಷ ಚೇತನದ ಬಿರ್ಕು ಗಾಂಧಿನಗರ ಅವರಿಗೆ ಮೊಬೈಲ್ ಹಸ್ತಾಂತರ ಮಾಡಲಾಯಿತು. ರಾಜ ಕೇಸರಿ ಸೇವಾ ಟ್ರಸ್ಟ್ ಸಂಚಾಲಕ ಜಗದೀಶ್ ಲಾಯಿಲ, ಸಾಂಸ್ಕೃತಿಕ ಕಾರ್ಯದರ್ಶಿ ದೇವರಾಜ್ ಪೂಜಾರಿ, ಗ್ರಾಮ ಪಂಚಾಯತ್ ಉಜಿರೆ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಗ್ರಾಮ ಪಂಚಾಯತ್ ಉಜಿರೆ ಅಭಿವೃದ್ಧಿ ಅಧಿಕಾರ ಪಿ.ಹೆಚ್. ಪ್ರಕಾಶ್ ಶೆಟ್ಟಿ, ಸೀತಾ ಆರ್. ಶೇಟ್, ವಿಪುಲ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಉಪಸ್ಥಿತರಿದ್ದರು.


 
            
