


ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನ.1ರಂದು ಬೆಳ್ತಂಗಡಿ ತಾಲೂಕು ಆಡಳಿತ ಸೌಧ ಆವರಣದಲ್ಲಿ ನಡೆಯಿತು.
ತಹಶೀಲ್ದಾರ್ ಪೃಥ್ವಿ ಸಾನಿಕಂ ಧ್ವಜಾರೋಹಣ ನೆರವೇರಿಸಿದರು. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ., ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್, ಸಹಕಾರ ಇಲಾಖೆಯ ಅಧಿಕಾರಿ ಪ್ರತಿಮಾ ಹಾಗೂ ತಾಲೂಕು ಮಟ್ಟದ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು. ವಾಣಿ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಮಹಾಬಲ ಗೌಡ ಕನ್ನಡ ರಾಜ್ಯೋತ್ಸವ ಕುರಿತು ಮಾತನಾಡಿದರು.




ವಿದ್ಯಾರ್ಥಿಗಳಿಗೆ ಸನ್ಮಾನ: ಎಸ್.ಎಸ್.ಎಲ್.ಸಿ ಪರೀಕ್ಷೆ 2024ನೇ ಸಾಲಿನಲ್ಲಿ ಕನ್ನಡ ಭಾಷೆಯಲ್ಲಿ 125 ಅಂಕ ಗಳಿಸಿದ ಮಹಮ್ಮದ್ ಅಜೀಂ, ನಿಶ್ಮಿತಾ, ಮೋಕ್ಷಿತ್, ಪೂಜಾ, ಸಿಂಚನ, ಸನ್ನಿಧಿ ಎಸ್ ಹೆಗಡೆ, ಗ್ರೀಷ್ಮ, ಅಮೃತ ಕೆ, ಅಂಕಿತ, ಐಶ್ವರ್ಯ ಡಿ ಗೌಡ, ವರ್ಷ, ಸುಜನ್ ಸಿ ಭಂಡಾರಿ, ನಿಶ್ವಿತ್, ಸನ್ವಿತ, ಪ್ರಿಯಾಂಕ, ಪಾತಿಮಾ ಶಮ್ನಾ, ನಿತ್ಯಶ್ರೀ, ಚೈತನ್ಯ ಯಜ್ಞೇಶ್ ರೈ, ಪ್ರಾಪ್ತಿ.ಎಂ ರಾವ್, ತನ್ವಿ ಭಟ್, ಭಾಗಲಕ್ಷ್ಮೀ, ಎಸ್ ಕೀರ್ತೀಕ ಅವರನ್ನು ಸನ್ಮಾನಿಸಲಾಯಿತು. 2024-25 ನೇ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪುರಸ್ಕೃತ ತಾಲೂಕು ಪಂಚಾಯತ್ ಸಂಯೋಜಕ ಜಯಾನಂದ ಅವರನ್ನು ಸನ್ಮಾನಿಸಲಾಯಿತು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿ, ವಾಣಿ ಕಾಲೇಜಿನ ಉಪನ್ಯಾಸಕರಾದ ಬೆಳ್ಳಿಯಪ್ಪ ಗೌಡ ಹಾಗೂ ಅನುರಾಧಾ ಕೆ.ರಾವ್ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.









