


ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ 150ನೇ ಜನ್ಮದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಏಕತಾ ದಿವಸವನ್ನು ಕಾಲೇಜಿನಲ್ಲಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ಏಕತಾ ದಿವಸದ ಮಹತ್ವ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿ ಬಿ.ಎ. ಶಮಿವುಲ್ಲಾ ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.


ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಶುಭ ಹಾರೈಸಿದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ನಾಯಕ ಆಶಿಕ್ ದ್ವಿತೀಯ ಬಿಕಾಂ ರಾಷ್ಟ್ರೀಯ ಏಕತಾ ಜಾತವನ್ನು ಏರ್ಪಡಿಸಿದರು. ಕಾಲೇಜಿನಿಂದ ಬೆಳ್ತಂಗಡಿ ಪೇಟೆಯವರಿಗೆ ರಾಷ್ಟ್ರೀಯ ಏಕತಾ ಜಾತವನ್ನು ನಡೆಸಲಾಯಿತು. ಎಲ್ಲ ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹ ಕಾರ್ಯಕ್ರಮ ಅಧಿಕಾರಿಗಳಾದ ಸತೀಶ್ ಧನ್ಯವಾದಗೈದರು.









