ಮಂಜೊಟ್ಟಿ: ರಝಾ ಗಾರ್ಡನ್ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದ ಸ್ಟಾರ್ ಲೈನ್ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಜನಾಬ್ ಸೈಯದ್ ಹಬೀಬ್ ಸಾಹೇಬ್ ಅವರು ರಾಜ್ಯೋತ್ಸವದ ಶುಭಾಶಯ ಕೋರಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿ ಸೈಯದ್ ಅಯ್ಯುಬ್, ಕೋಶಾಧಿಕಾರಿ ಸಯ್ಯದ್ ಇರ್ಫಾನ್ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಜಾಕಿನ್ ಬಿನ್ ಉಪಸ್ಥಿತರಿದ್ದರು.
ಶಾಲೆಯ ಕನ್ನಡ ಶಿಕ್ಷಕಿ ಶ್ವೇತ ಅವರು ರಾಜ್ಯೋತ್ಸವದ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಗೆ ವಿದ್ಯಾರ್ಥಿಗಳಿಗೆ ಸಿಹಿಯನ್ನು ಹಂಚಲಾಯಿತು. ದೈಹಿಕ ಶಿಕ್ಷಣ ಶಿಕ್ಷಕ ಸುಂದರ್ ಕಾರ್ಯಕ್ರಮ ನಿರೂಪಿಸಿದರು. ಮುಖ್ಯೋಪಾಧ್ಯಾಯಿನಿ ಜಾಕಿನ್ ಬಿನ್ ಅತಿಥಿಗಳಿಗೆ ಧನ್ಯವಾದವನ್ನು ಕೋರಿದರು.

