Site icon Suddi Belthangady

ಅನುಗ್ರಹ  ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಫಾ! ಅಬೆಲ್ ಲೋಬೊ ಅವರು ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಫಾ ವಿಜಯ್ ಲೋಬೊ, ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲಾ ಸಂಚಾಲಕರು ರಾಷ್ಟ್ರಧ್ವಜ ಹಾಗೂ ನಾಡ ಧ್ವಜವನ್ನು ಆರೋಹಿಸಿದರು.

ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಗೂ ನಾಡಗೀತೆಯನ್ನು ಹಾಡುವುದರ ಮೂಲಕ ಗೌರವವನ್ನು ಅರ್ಪಿಸಿದರು. 10ನೇ ತರಗತಿ ವಿದ್ಯಾರ್ಥಿನಿ ಶ್ರೇಯಾ ಕನ್ನಡ ರಾಜ್ಯೋತ್ಸವದ ಮಹತ್ವವನ್ನು ಕುರಿತು ಮಾತನಾಡಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಸಂಚಾಲಕರು ಕನ್ನಡ ಭಾಷೆ ಸಾಹಿತ್ಯ ಬೆಳೆದು ಬಂದ ದಾರಿ, ಕನ್ನಡದ ಸ್ಥಾನಮಾನ ಮತ್ತು ಭಾಷೆಯ ಉಳಿವಿಗಾಗಿ ಕನ್ನಡಿಗರು ಮಾಡಬೇಕಾದ ಕಾರ್ಯಗಳನ್ನು ಕುರಿತು ಮಾತನಾಡಿದರು. ನಂತರ ವಿದ್ಯಾರ್ಥಿಗಳು ಕನ್ನಡ ನಾಡು ನುಡಿ ಕುರಿತ ಹಾಡು ನೃತ್ಯಗಳ ಮೂಲಕ ರಂಜಿಸಿದರು. ವಿದ್ಯಾರ್ಥಿಗಳಾದ ಪ್ರತೀಕ್ಷ ಶೆಟ್ಟಿ ಸ್ವಾಗತಿಸಿ, ಅಂಶಿಕ ಕಾರ್ಯಕ್ರಮ ನಿರೂಪಿಸಿದರು. ಸಿಂಚನ ವಂದಿಸಿದರು.

Exit mobile version