


ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ. 1ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಿಸಲಾಯಿತು. ಪ್ರೊ| ಲಿಯೋ ನೋರೊನ್ಹ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ವಿದ್ಯಾರ್ಥಿನಿ ಯಶ್ಮಿ ಅವರು ಕನ್ನಡ ರಾಜ್ಯೋತ್ಸವದ ಮಹತ್ವದ ಬಗ್ಗೆ ವಿವರಣೆಯನ್ನು ನೀಡಿದರು. ವಿದ್ಯಾರ್ಥಿಗಳು ಗೀತ ಗಾಯನ ಮತ್ತು ನೃತ್ಯದ ಮೂಲಕ ಕನ್ನಡಾಂಬೆಗೆ ನುಡಿ ನಮನ ಸಲ್ಲಿಸಿದರು.



ಪ್ರೊ|ಲಿಯೋ ನೋರೊನ್ಹ ಅವರು ಮಕ್ಕಳನ್ನು ಉದ್ದೇಶಿಸಿ ಮತಾನಾಡಿ ನಮ್ಮಲ್ಲಿರುವ ದುಡ್ಡು, ಸಂಪತ್ತು ಯಾರೂ ಬೇಕಾದರೂ ಲೂಟಿ ಮಾಡಬಹುದು ಆದರೆ ನಾವು ಪ್ರಪಂಚದ ಯಾವುದೇ ಮೂಲೆಯಲ್ಲಿದ್ದರೂ ನಮ್ಮೊಳಗಿನ ದೇಶಾಭಿಮಾನ, ಭಾಷಾಭಿಮಾನವನ್ನು ಯಾರಿಂದಲೂ ಲೂಟಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿ, ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಸ್ವಾ| ದೀಪಕ್ ಲಿಯೋ ಡೇಸ ಅವರು, ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಹಶಿಕ್ಷಕಿ ಭಾಗ್ಯಶ್ರೀ ಸ್ವಾಗತಿಸಿ, ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಆರಾಧ್ಯ ನಿರೂಪಿಸಿದರು. ವಿದ್ಯಾರ್ಥಿ ಪ್ರಥಮ್ ಧನ್ಯವಾದ ಸಮರ್ಪಿಸಿದರು.









