ಬೆಳ್ತಂಗಡಿ: ಸ. ಪ.ಪೂ. ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ

0

ಬೆಳ್ತಂಗಡಿ: 70ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ ನಡೆಯಿತು. ಗಮಕ ವಾಚನವನ್ನು ತಮ್ಮ ಸುಶ್ರಾವ್ಯ ಕಂಠದ ಮೂಲಕ ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ನಡೆಸಿಕೊಟ್ಟರು. ಗಮಕ ವ್ಯಾಖ್ಯಾನಕಾರರಾಗಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ಭಾಗವಹಿಸಿ ಪ್ರೇಕ್ಷಕರ ಮನ ಗೆದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಕುಮಾರ್ ಜೈನ್ ವಹಿಸಿದರು. ಮೋಹನ ಕಲ್ಲೂರಾಯರನ್ನು ಸಂಸ್ಥೆಯಿಂದ ಗೌರವಿಸಲಾಯಿತು. ಪ್ರಥಮ ಪಿಯುಸಿ ಪಠ್ಯ ಭಾಗದ ವಿಷಯವೇ ಗಮಕದಲ್ಲಿ ಆಯ್ಕೆ ಮಾಡಿಕೊಂಡ ಕಾರಣ ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

ವಿದ್ಯಾರ್ಥಿಗಳ ನಾಡಗೀತೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಉಪನ್ಯಾಸಕ ಆನಂದ ಅವರು ಸ್ವಾಗತಿಸಿದರರು. ಕಾರ್ಯಕ್ರಮದ ನಿರೂಪಣೆಯನ್ನು ಉಪನ್ಯಾಸಕಿ ಡಾ.ಅಮೃತ ರಶ್ಮಿ ಫರ್ನಾಂಡಿಸ್ ನಡೆಸಿಕೊಟ್ಟರು. ಉಪನ್ಯಾಸಕ ಡಾ. ಗಣೇಶ್ ಭಟ್ ಅವರು ಪ್ರಾಸ್ತಾವಿಕ ಮಾತನಾಡಿದರು. ವೇದಿಕೆಯಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯಸ್ಥೆ ಪೂರ್ಣಿಮಾ ಉಪಸ್ಥಿತರಿದ್ದರು. ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ಉಪನ್ಯಾಸಕರು, ಅಧ್ಯಾಪಕರು, ವಿದ್ಯಾರ್ಥಿಗಳು, ಬಿಇಡಿ ಪ್ರಶಿಕ್ಷಣಾರ್ಥಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು. ಉಪನ್ಯಾಸಕ ಶೀನಾ ನಾಡೋಳಿ ವಂದಿಸಿದರು.

LEAVE A REPLY

Please enter your comment!
Please enter your name here