


ಮಡಂತ್ಯಾರು: “ಕನ್ನಡ ರಾಜ್ಯೋತ್ಸವವು ಕನ್ನಡ ಭಾಷೆ, ಸಂಸ್ಕೃತಿ, ಮತ್ತು ಪರಂಪರೆಯನ್ನು ಗೌರವಿಸುವ, ರಾಜ್ಯ ಏಕೀಕರಣಕ್ಕಾಗಿ ಹೋರಾಡಿದ ನಾಯಕರನ್ನು ಸ್ಮರಿಸುವ, ಹಾಗೂ ಕನ್ನಡಿಗರಲ್ಲಿ ಏಕತೆ ಮತ್ತು ಹೆಮ್ಮೆಯನ್ನು ಬೆಳೆಸುವ ಮಹತ್ವದ ಹಬ್ಬವಾಗಿದೆ. ಈ ದಿನದ ಮಹತ್ವವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು” ಎಂಬುದಾಗಿ ಸೇಕ್ರೆಡ್ ಹಾರ್ಟ್ ಕಾಲೇಜು ಪ್ರಾಂಶುಪಾಲ ಪ್ರೊ ಅಲೆಕ್ಸ್ ಐವನ್ ಸಿಕ್ವೇರಾ ನುಡಿದರು. ಅವರು ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷ ಸ್ಥಾನದಿಂದ ಮಾತನಾಡುತ್ತಿದ್ದರು.


ಪ್ರಥಮ ಬಿಸಿಎ ವಿದ್ಯಾರ್ಥಿ ಮಹಮ್ಮದ್ ಹಫೀಜ್ ರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿದರು. ವಿದ್ಯಾರ್ಥಿ ಮಿಥನ್ ಕನ್ನಡದ ಹಾಡನ್ನು ಹಾಡಿದರು. ಕನ್ನಡ ವಿಭಾಗ, ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ., ರೋವರ್ಸ್ ಮತ್ತು ರೇಂಜರ್ಸ್ ಸಂಯೋಜನೆಯಲ್ಲಿ ನಡೆದ ಕಾರ್ಯಕ್ರಮ ನಾಡಗೀತೆಯೊಂದಿಗೆ ಆರಂಭವಾಯಿತು. ಕನ್ನಡ ಉಪನ್ಯಾಸಕಿ ರಾಜೇಶ್ವರಿ ಸಂಯೋಜಿಸಿದ ಕಾರ್ಯಕ್ರಮದ ವೇದಿಕೆಯಲ್ಲಿ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಶ್ರೀನಾಥ್ ಉಪಸ್ಥಿತರಿದ್ದರು. ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರು ಉಪಸ್ಥಿತರಿದ್ದ ಕಾರ್ಯಕ್ರಮ ಸಂಭ್ರಮದಿಂದ ನೆರವೇರಿತು.









