


ಧರ್ಮಸ್ಥಳ: ಕನ್ಯಾಡಿ -2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 70ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಕೆ. ನಂದ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವು ಬಹಳ ಅಚ್ಚುಕಟ್ಟಾಗಿ ನೆರವೇರಿತು.


ತಾಯಿ ಭುವನೇಶ್ವರಿ ದೇವಿಗೆ ದೀಪವನ್ನು ಬೆಳಗಿಸಿ, ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ನಮನವನ್ನು ಸಲ್ಲಿಸಲಾಯಿತು. ಮಕ್ಕಳು ಕನ್ನಡ ನಾಡು ನುಡಿಗೆ ಸಂಬಂಧಿಸಿದ ಹಾಡನ್ನು ಹಾಡುವುದರ ಮೂಲಕ ಕನ್ನಡಾಂಬೆಗೆ ನಮನವನ್ನು ಸಲ್ಲಿಸಿದರು. ಕನ್ನಡ ಕನ್ನಡ ನಾಡು ನುಡಿಯ ಇತಿಹಾಸ, ಹಿರಿಮೆ- ಗರಿಮೆಯನ್ನು ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಪುಷ್ಪಾ ಎನ್. ಮಕ್ಕಳಿಗೆ ತಿಳಿಸಿದರು.
ಶಾಲಾ ಶಿಕ್ಷಕ ವೃಂದ, ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ಪ್ರಶಿಕ್ಷಣಾರ್ಥಿಗಳು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಗೆ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿಯನ್ನು ಹಂಚಲಾಯಿತು. ಸ್ವಾಗತ ನಿರೂಪಣೆ ಮತ್ತು ಧನ್ಯವಾದ ಶಾಲಾ ಮುಖ್ಯ ಶಿಕ್ಷಕಿ ಪುಷ್ಪಾ ಎನ್. ನಿರ್ವಹಿಸಿದರು.









