Site icon Suddi Belthangady

ಕಲಾ ಸಿಂಚನ 2025: ಅನುಗ್ರಹ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ

ಬೆಳ್ತಂಗಡಿ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಅನುದಾನಿತ ಪದವಿ ಪೂರ್ವ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ ಸಂಘದಿಂದ ನ. 2ರಂದು ಕಲಾ ಸಿಂಚನ 2025 ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ಸಮೂಹ ನೃತ್ಯವನ್ನುಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯರಾದ ನಿಶಾನ್ಯ, ಅನುಶ್ರೀ, ಅದಿತಿ, ಅಭಿಜ್ಞಾ, ಸಾನ್ವಿ, ವರ್ಷಿತ, ಕೀರ್ತನ, ಏಂಜಲಿನ್  ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ವಿಜೇತ ವಿದ್ಯಾರ್ಥಿನಿಯರನ್ನು ಶಾಲಾ ಸಂಚಾಲಕ ಫಾ. ಅಬೆಲ್ ಲೋಬೊ, ಶಾಲಾ ಪ್ರಾಂಶುಪಾಲ ಫಾ. ವಿಜಯ್ ಲೋಬೊ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

Exit mobile version