ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

0

ಬೆಳ್ತಂಗಡಿ: ವಿದ್ಯಾರ್ಥಿಗಳು ಸನ್ಮಾರ್ಗ, ಶ್ರಮ, ಪ್ರಾಮಾಣಿಕತೆ ಮತ್ತು ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಜರಗಿದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ, ಆಧುನಿಕ ತಂತ್ರಜ್ಞಾನವು ಉತ್ತಮ ರೀತಿಯಲ್ಲಿ ಬಳಕೆಯಾಗದೆ ದುರುಪಯೋಗವಾಗುತ್ತಿರುವುದು ವಿಪರ್ಯಾಸವಾಗಿದೆ. ಇದರಿಂದ ವಿದ್ಯಾರ್ಥಿಗಳು ಸೃಜನಶೀಲರಾಗಲು ತಡೆಯುಂಟಾಗಿದೆ. ವಿದ್ಯಾರ್ಥಿ ಜೀವನದ ಯಶಸ್ಸಿಗೆ ವಿದ್ಯಾರ್ಥಿ,ಪೋಷಕರು, ಮತ್ತು ಶಿಕ್ಷಣ ಸಂಸ್ಥೆ ಸಮಾನ ಸಹಭಾಗಿತ್ವವನ್ನು ವಹಿಸಬೇಕಾಗಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ. ಅವರು ಉತ್ತಮ ಫಲಿತಾಂಶವನ್ನು ಪಡೆಯುವಲ್ಲಿ ಪೋಷಕರ ಜವಾಬ್ದಾರಿಗಳನ್ನು ಕುರಿತು ಮಾಹಿತಿಯನ್ನು ನೀಡಿದರು. ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿರಿದ್ದರು. ಶಿಕ್ಷಕ ರಕ್ಷಕ ಸಂಘದ ಸದಸ್ಯ ಮಹಾಬಲ ಗೌಡ ಕಾರ್ಯಕ್ರಮ ಸ್ವಾಗತಿಸಿ ನಿರ್ವಹಿಸಿದರು. ಉಪನ್ಯಾಸಕಿ ಶಾಲಿಕಾ ಪಿ.ಆರ್. ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here