


ಧರ್ಮಸ್ಥಳ: ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ ನ. 1ರಂದು ನೆರವೇರಿತು. ಧರ್ಮಸ್ಥಳ ಬಿಜೆಪಿ ಹಿರಿಯ ಕಾರ್ಯಕರ್ತ ರಾಜೇಂದ್ರ ಅಜ್ರಿ ಅವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು.
ಬೆಳ್ತಂಗಡಿ ಬಿಜೆಪಿ ಮಂಡಲಾಧ್ಯಕ್ಷ ಶ್ರೀನಿವಾಸ್ ರಾವ್ ಉದ್ಘಾಟನಾ ಭಾಷಣ ಮಾಡಿದರು.


ನಮ್ಮ ವೈಚಾರಿಕತೆ ಮತ್ತು ಪಂಚ ಪರಿವರ್ತನೆ ವಿಷಯವನ್ನು ನಂದಕುಮಾರ್,ಬೂತ್ ಸಂಘಟನೆ ಮತ್ತು ಸ್ಥಳೀಯ ಆಡಳಿತದೊಂದಿಗೆ ನಮ್ಮ ಪಾತ್ರ ಈ ವಿಷಯವನ್ನು ಸೀತಾರಾಮ್ ಬೆಳಾಲು, ವಿಕಸಿತ ಭಾರತದ ಅಮೃತ ಕಾಲದಲ್ಲಿ ನಮ್ಮ ಸಕ್ರಿಯತೆ ವಿಷಯವನ್ನು ವೃಷಾಂಕ್ ಖಾಡಿಲ್ಕರ್ ಅರಸಿನಮಕ್ಕಿ ಬೈಠಕ್ ನೀಡಿದರು. ಬಿಜೆಪಿ ಗೀತೆಯೊಂದಿಗೆ ಸಂಪದ ಆರಂಭ ಆಗಿ ಶಾಂತಿ ಮಂತ್ರದೊಂದಿಗೆ ಮುಕ್ತಾಯಗೊಂಡಿತು.
ಸಮಾರೋಪ ಅವಧಿಯಲ್ಲಿ ಸಿಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ. ಅವರು ಸ್ವಾಗತಿಸಿದರು. ಶಾಸಕ ಹರೀಶ್ ಪೂಂಜ ಸಮಾರೋಪ ಭಾಷಣ ಮಾಡಿದರು. ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಗಣೇಶ್ ಹೊಸ್ತೋಟ ಬೂತ್ ವರದಿ ಪಡೆದುಕೊಂಡರು. ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ ಉಪಸ್ಥಿತರಿದ್ದರು. ಶಕ್ತಿಕೇಂದ್ರ ಪ್ರಮುಖ್ ವಿಕ್ರಮ್ ಗೌಡ ಧನ್ಯವಾದ ಸಮರ್ಪಿಸಿದರು.









