


ಬೆಳಾಲು: ಶ್ರೀ ಧ. ಮಂ. ಅ. ಪ್ರೌಢ ಶಾಲೆಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ, ಕನ್ನಡಕ್ಕಾಗಿ ಹೋರಾಡಿದ ವ್ಯಕ್ತಿಗಳನ್ನು ಸ್ಮರಿಸುವುದರ ಜೊತೆಗೆ ಸುಂದರ – ಸುಲಲಿತವಾದ ಕನ್ನಡ ಭಾಷೆಯನ್ನು ಮಾತನಾಡುತ್ತಾ ನಾವು ಕನ್ನಡಿಗರು ಎಂಬ ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ವಿದ್ಯಾರ್ಥಿಗಳಾದ ಶ್ರೇಯಸ್ ದಿನದ ಮಹತ್ವದ ಕುರಿತು ಮಾತನಾಡಿದರು. ತ್ರಿಶಾ ಜೈನ್ ಮತ್ತು ಮೋಕ್ಷಿತ್ ಸ್ವರಚಿತ ಕವನವನ್ನು ವಾಚಿಸಿದರು. ವಿದ್ಯಾರ್ಥಿಗಳಿಂದ ನಾಡಗೀತೆಗಳ ಗಾಯನ ನೆರವೇರಿತು.
ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ಪದಬಂಧ ತುಂಬಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಪುಸ್ತಕ ಮತ್ತು ಪುರಸ್ಕೃತರ ಪ್ರಮುಖ ಪುಸ್ತಕವನ್ನು ಪ್ರದರ್ಶಿಸಲಾಯಿತು.


ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶಾಲೆಗೆ ಟಿ.ವಿ. ಯನ್ನು ಕೊಡುಗೆಯಾಗಿ ನೀಡಲಾಯಿತು. ಇದನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಶಿಧರ್ ಮತ್ತು ಉಪಾಧ್ಯಕ್ಷ ಪದ್ಮನಾಭ ಅವರು ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು.
ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಕುರ್ಕಿಲ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕನ್ನಡ ಶಿಕ್ಷಕ ಸುಮನ್ ಯು.ಎಸ್. ಸಂಯೋಜಿಸಿದರು. ವಿದ್ಯಾರ್ಥಿಗಳಾದ ಮೋಹನ್ ಕೃಷ್ಣ ಸ್ವಾಗತಿಸಿ, ಆಯಿಷತ್ ಸಂಶಿಯಾ ನಿರೂಪಿಸಿದರು. ಕಾರ್ತಿಕ್ ವಂದಿಸಿದರು.









