Site icon Suddi Belthangady

ಎಸ್‌.ಡಿ.ಪಿ.ಐ ಬೆಳ್ತಂಗಡಿ ಕ್ಷೇತ್ರ ಸಮಿತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ

ಬೆಳ್ತಂಗಡಿ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಪಕ್ಷದ ಕಚೇರಿ ಮುಂಭಾಗದಲ್ಲಿ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ನಡೆಯಿತು.

ಸಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕ ಎಸ್‌ಡಿಪಿಐ ಸಂಕಲ್ಪ, ಒಲವಿನ ಕರ್ನಾಟಕ ಎಂಬ ಘೋಷವಾಕ್ಯದೊಂದಿಗೆ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಧ್ವಜಾರೋಹಣ ನಡೆಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಎಸ್‌.ಡಿ.ಪಿ.ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಅತಿಥಿ ಭಾಷಣ ಮಾಡಿದರು. ಎಸ್‌.ಡಿ.ಪಿ.ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಉಪಾಧ್ಯಕ್ಷ ನಿಸಾರ್ ಕುದ್ರಡ್ಕ, ಜೊತೆ ಕಾರ್ಯದರ್ಶಿ ರಶೀದ್ ಬೆಳ್ತಂಗಡಿ, ಕೋಶಾಧಿಕಾರಿ ಸ್ವಾಲಿ ಮದ್ದಡ್ಕ, ಸಮಿತಿ ಸದಸ್ಯರಾದ ಅಶ್ರಫ್ ಕಟ್ಟೆ, ಮುಸ್ತಫಾ ಜಿ.ಕೆರೆ, ಉಜಿರೆ ಬ್ಲಾಕ್ ಅಧ್ಯಕ್ಷ ಸಲೀಂ ಲಾಯಿಲ, ಕಾರ್ಯದರ್ಶಿ ಮರ್ಷಾ ಉಜಿರೆ, ಸಾದಿಕ್ ಲಾಯಿಲ, ಬೆಳ್ತಂಗಡಿ ನಗರ ಸಮಿತಿ ಉಪಾಧ್ಯಕ್ಷ ಇಸ್ಮಾಯಿಲ್ ಬೆಳ್ತಂಗಡಿ ಹಾಗೂ ಪಕ್ಷದ ಬ್ರಾಂಚ್ ಪದಾಧಿಕಾರಿಗಳು ಉಪಸ್ಥಿತರಿದ್ದರು. ರೌಫ್ ಪುಂಜಾಲಕಟ್ಟೆ ಸ್ವಾಗತಿಸಿ, ಧನ್ಯವಾದಗೈದರು.

Exit mobile version