




ಮಡಂತ್ಯಾರು: ಪೇಟೆಯಲ್ಲಿ ಗಾಂಜಾ ಸೇವಿಸಿ ನ.2ರಂದು ಬೆಳಗ್ಗೆ 10:45ಕ್ಕೆ ಅಸಭ್ಯ ರೀತಿಯಲ್ಲಿ ವರ್ತಿಸಿದ ವ್ಯಕ್ತಿಯನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ರಕೇಶ್ವರಿಪದವು ನಿವಾಸಿ ಸದಾನಂದ ಪೂಜಾರಿ ಮಗ ಸಂಕೇತ್ (28) ಎಂಬಾತನಾಗಿದ್ದು, ಈತನನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ನಿಷೇಧಿತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.


            






