




ಮಡಂತ್ಯಾರು: ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟವು ನ. 3ರಂದು ಸೇಕ್ರೆಡ್ ಹಾರ್ಟ್ ಕ್ರೀಡಾಂಗಣದಲ್ಲಿ ನೆರವೇರಿತು. ಈ ಕ್ರೀಡಾಕೂಟದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 14ರ ವಯೋಮಾನದ ಬಾಲಕರ ವಿಭಾಗದಲ್ಲಿ 8ನೇ ತರಗತಿಯ ನಿಖಿಲ್ ಶೆಟ್ಟಿ, ವರ್ಣಿತ್ ಮತ್ತು ಮನ್ವಿತ್ ಅವರು ಪ್ರಥಮ ಸ್ಥಾನವನ್ನು ಹಾಗೂ 7ನೇ ತರಗತಿಯ ಡೆಲ್ವಿನ್ ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 7ನೇ ತರಗತಿಯ ಫ್ಲಾವಿಯನ್ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಶಾಲಾ ದೈಹಿಕ ಶಿಕ್ಷಕ ವಲೇರಿಯನ್ ಡಿಸೋಜ ಮತ್ತು ಮಂಜುನಾಥ ಅವರು ತರಬೇತಿಯನ್ನು ನೀಡಿರುತ್ತಾರೆ.









