Site icon Suddi Belthangady

ಲಾಯಿಲ: ಕರ್ನೋಡಿ ಸ. ಉ. ಹಿ. ಪ್ರಾ. ಶಾಲೆಯಲ್ಲಿ 1ನೇ ತರಗತಿ ದ್ವಿಭಾಷಾ ಮಾದ್ಯಮ ಉದ್ಘಾಟನೆ

ಲಾಯಿಲ: ಕರ್ನೋಡಿ ಸ. ಉ. ಹಿ. ಪ್ರಾ. ಶಾಲೆಯಲ್ಲಿ 1ನೇ ತರಗತಿ ದ್ವಿ ಭಾಷಾ ಮಾಧ್ಯಮ (ಆಂಗ್ಲ ಮಾದ್ಯಮ) ಉದ್ಘಾಟನಾ ಕಾರ್ಯಕ್ರಮ ನ.3ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಎಂ.ಕೆ. ಅವರು ವಹಿಸಿದ್ದರು.

ಹಳೆ ವಿದ್ಯಾರ್ಥಿ ಸಂಘದ ಗೌರವ ಅಧ್ಯಕ್ಷ ಬಿ.ಕೆ. ಧನಂಜಯ ರಾವ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ತಾಲ್ಲೂಕಿನ ಶಾಸಕ ಹರೀಶ್ ಪೂಂಜ ಅವರು ಮಕ್ಕಳಿಗೆ ಉಚಿತ ಪಠ್ಯ ಪುಸ್ತಕವನ್ನು ವಿತರಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಗಂಧಿ ಜಗನ್ನಾಥ್, ಸದಸ್ಯರಾದ ಗಣೇಶ್ ಆರ್., ಅರವಿಂದ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ಕ್ಷೇತ್ರ ಸಮನ್ವಯ ಅಧಿಕಾರಿ ಟಿ.ಬಿ. ಬಸಲಿಂಗಪ್ಪ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮೋಹನ್ ಕುಮಾರ್ ಸಿ.ಎನ್., ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಸೌಮ್ಯ, ಕರ್ನೋಡಿ ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಸದಾಶಿವ ಸಮಗಾರ ಕಕ್ಕೇನ ವೇದಿಕೆಯಲ್ಲಿ ಉಪಸ್ಥಿತರಿದ್ದರು.

1ನೇ ತರಗತಿಯ ಮಕ್ಕಳಿಗೆ ಹಳೆ ವಿದ್ಯಾರ್ಥಿ ಸಂಘದ ಸದಸ್ಯ ಅಶ್ರಫ್ ಮಾಂಜಾಲು ಅವರು ಸಮವಸ್ತ್ರವನ್ನು ಉಚಿತವಾಗಿ ನೀಡಿದರು. ಸಹ ಶಿಕ್ಷಕರಾದ ಕೃಷ್ಣ ಕುಮಾರ್, ಗಂಗಾರಾಣಿ, ತ್ರಿಷಾಲ, ಲೀನಾ ಡಿಸೋಜಾ ಅವರು ಸಹಕರಿಸಿದರು. ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಸಲಹೆಗಾರರು, ಸದಸ್ಯರು, S.D.M.C ಸಮಿತಿಯ ಪದಾಧಿಕಾರಿಗಳು, ಪೋಷಕರು, ಮತ್ತು ವಿದ್ಯಾಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮುಖ್ಯ ಶಿಕ್ಷಕ ಜಗನ್ನಾಥ ಎಂ. ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಶಿಕ್ಷಕಿ ಉಷಾ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ಮಮತಾ ಧನ್ಯವಾದಗೈದರು.

Exit mobile version