


ಬೆಳ್ತಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಆಚರಿಸಿದ ಕನ್ನಡ ರಾಜ್ಯೋತ್ಸವದಲ್ಲಿ ವೀರೇಂದ್ರ ಜೈನ್ ಅವರು ಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಸವದ ಶುಭ ಸಂದೇಶವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ನಸೀರ್ ಅಹಮ್ಮದ್ ಖಾನ್ ಅವರು ವಹಿಸಿ ಶುಭಾಶಯವನ್ನು ಕೋರಿದರು. ಮುಖ್ಯೋಪಾಧ್ಯಾಯ ಪ್ರಭಾಕರ ಶೆಟ್ಟಿ ಅವರು ರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಮುಖ್ಯ ಅತಿಥಿ ಶಾಜಿ ಕೆ. ಕುರಿಯನ್ ಅವರು ಕನ್ನಡ ಭಾಷೆಯ ಅಭಿವೃದ್ಧಿಗಾಗಿ ನಾವೆಲ್ಲರೂ ಸದಾ ಬದ್ಧರಾಗಿರಬೇಕೆಂದು ತಿಳಿಸಿದರು.


ವೇದಿಕೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶುಕುರ್ ಸಾಹೇಬ್, ಉಪಾಧ್ಯಕ್ಷ ಧನಕೀರ್ತಿ ಜೈನ್, ಮಾಜಿ ಉಪಾಧ್ಯಕ್ಷೆ ಹರಿಣಾಕ್ಷಿ ಅವರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ರೂಪ ನಿರೂಪಿಸಿ, ಶೃತಿ ವಂದಿಸಿದರು.


            






