


ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ನ.1ರಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ಅವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಯಾಗಿ ಸ್ಥಳೀಯ ಪ್ರಗತಿಪರ ಕೃಷಿಕ ರಾಮನಂದ ನಾಯಕ ಅವರು ಉಪಸ್ಥಿತರಿದ್ದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶೀನಪ್ಪಗೌಡ ಅವರು ಕನ್ನಡ ನಾಡು ನುಡಿಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು. ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ಮಾತನಾಡಿ ಕನ್ನಡ ನಾಡು ಬೆಳೆದು ಬಂದ ಹಾದಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಶಾಲಾ ವಿದ್ಯಾರ್ಥಿಗಳಿಂದ ಕನ್ನಡ ರಾಜ್ಯೋತ್ಸವದ ಕುರಿತು ಭಾಷಣ ಹಾಗೂ ನೃತ್ಯ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಮೇಲಿನಡ್ಕದ ಮೋಹನ್ ಭಟ್ ಅವರ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ವಿತರಿಸಲಾಯಿತು.
ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಪುಷ್ಪಲತಾ ಸ್ವಾಗತಿಸಿ, ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿ ಜತಿಕ್ಷ ನಿರೂಪಿಸಿದರು. ಶಾಲೆ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶೀಲಾ ಎನ್. ರವರು ಧನ್ಯವಾದಗೈದರು.









