Site icon Suddi Belthangady

ತಾಲೂಕು ಮಟ್ಟದ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮದಲ್ಲಿ ಸ.ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಬಹುಮಾನ: ಜಿಲ್ಲಾಮಟ್ಟಕ್ಕೆ ಆಯ್ಕೆ

ವೇಣೂರು : ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ )ವೇಣೂರಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಬಹುಮಾನವನ್ನು ಪಡೆದಿದ್ದಾರೆ.

ಕನ್ನಡ ಪ್ರಬಂಧದಲ್ಲಿ ಎಂಟನೇ ತರಗತಿಯ ಅನ್ವಿತ ಪ್ರಥಮ ಸ್ಥಾನ, ಹತ್ತನೇ ತರಗತಿಯ ಶರತ್ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ ಹಾಗೂ 9ನೇ ತರಗತಿಯ ಧನುಶ್ರೀ ಎಸ್. ಕುಲಾಲ್ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿಜೇತ ವಿದ್ಯಾರ್ಥಿಗಳಿಗೆ ಉಪ ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿ ವರ್ಗ, SDMC ಕಾರ್ಯಾಧ್ಯಕ್ಷರು ಮತ್ತು ಸದಸ್ಯರಿಂದ ಅಭಿನಂದಿಸಲಾಯಿತು.

Exit mobile version