ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ನಾವೂರು ಸರಕಾರಿ ಪ್ರೌಢಶಾಲೆಯ ಆಶ್ರಯದಲ್ಲಿ
ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ, ಬಾಲಕಿಯರ ಕ್ರೀಡಾಕೂಟವು ನ.3 ಹಾಗೂ 4ರಂದು ಬಂಟ್ವಾಳದ ಎಸ್.ವಿ.ಎಸ್ ದೇವಳ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಿತು.
ಕ್ರೀಡಾಕೂಟದಲ್ಲಿ ಎಲ್. ಸಿ. ಆರ್. ವಿದ್ಯಾ ಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಒಟ್ಟು 4 ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಬಾಲಕಿಯರ 14ರ ವಯೋಮಾನದ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಅಪರ್ಣ ಎ ಶೆಟ್ಟಿ 7 ನೇ ತರಗತಿ ಇವರು ತೃತೀಯ ಸ್ಥಾನ ಪಡೆದರು.
ಬಾಲಕರ 17ರ ವಯೋಮಾನದ 110 ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ಪ್ರೀತಮ್ ಡಿ.ಕೆ ಹತ್ತನೇ ತರಗತಿ ಇವರು ತೃತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡರು. ಹಾಗೂ 17ರ ವಯೋಮಾನದ ಬಾಲಕಿಯರ ಜಾವಲಿನ್ ಎಸೆತದಲ್ಲಿ ಧನ್ವಿತಾ ಎಂಟನೇ ತರಗತಿ ಅವರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಎಲ್ ಸಿ ಆರ್ ವಿದ್ಯಾಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.
ಈ ಮೂರು ವಿದ್ಯಾರ್ಥಿಗಳ ಪ್ರಶಂಸಾರ್ಹ ಸಾಧನೆಗೆ ಹಾಗೂ ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿ ಹರಿಣಾಕ್ಷಿ ಜಿ.ಕೆ. ಅವರನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕರು, ಮುಖ್ಯ ಶಿಕ್ಷಕಿ ಹಾಗೂ ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿ ಶುಭ ಹಾರೈಸಿದರು.

