ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ನಿರ್ಮಿಸಿದ ಕೆನರಾ ಬ್ಯಾಂಕಿನ ಎ.ಟಿ.ಎಂ ನ್ನು ಕೆನರಾ ಬ್ಯಾಂಕ್ ಎ.ಡಿ.ಎಂ ಭುವನೇಂದ್ರ ಕುಮಾರ್ ಉದ್ಘಾಟನೆ ಮಾಡಿದರು.
ಸಿರಿ ಸಂಸ್ಥೆಯ ಆಡಳಿತ ನಿರ್ದೇಶಕ ಜನಾರ್ದನ್, ಕೆನರಾ ಬ್ಯಾಂಕ್ ಮಂಗಳೂರು ಸರ್ಕಲ್ ಆಪೀಸ್ ಜನರಲ್ ಮ್ಯಾನೇಜರ್ ಮಂಜುನಾಥ್, ಬೆಂಗಳೂರು ಚೀಫ್ ಜನರಲ್ ಮ್ಯಾನೇಜರ್ ಶಂಭುಲಾಲ್, ಪುತ್ತೂರು ರಿಜೀನಲ್ ಆಫೀಸ್ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ರಂಜನ್ ಕುಮಾರ್,ಬೆಳ್ತಂಗಡಿ ಕೆನರಾ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಪ್ರತಾಪ್, ಮಂಗಳೂರು ಸರ್ಕಲ್ ಆಫೀಸ್ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ನರೇಶ್, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕ ರಾಜೇಶ್ ಪೈ ಉಜಿರೆ, ಪುತ್ತೂರು ಡಿವಿಜಿನಲ್ ಮ್ಯಾನೇಜರ್ ಅಜಿತ್ ಕುಮಾರ್, ರುಡ್ ಸೆಟ್ ಎಕ್ಸಿಕ್ಯುಟಿವ್ ಡೈರೆಕ್ಟರ್ ವಿಜಯ್ ಕುಮಾರ್, ರುಡ್ ಸೆಟ್ ನಿರ್ದೇಶಕ ಅಜೇಯ, ಪುತ್ತೂರು ರೀಜನಲ್ ಆಫೀಸ್ ಮಾರ್ಕೆಟಿಂಗ್ ಮ್ಯಾನೇಜರ್ ಹರೀಶ್ ನಾಯ್ಕ್,ಸಿರಿ ಸಂಸ್ಥೆಯ ಸಿಇಓ ಪ್ರಸನ್ನ ಹಾಗೂ ಇತರರು ಉಪಸ್ಥಿತರಿದ್ದರು.

