ಬೆಳ್ತಂಗಡಿ: ಪಟ್ಟಣ ಪಂಚಾಯತ್ ವ್ಯಾಪ್ತಿಯ ರೆಂಕೆದಗುತ್ತು ನಿವಾಸಿ ಬಶೀರ್ ಅವರು ನ.6ರಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ನೇಣುಬಿಗಿದ ಸ್ಥಿತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಮೃತದೇಹವನ್ನು ತಾಲೂಕು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಅವರು ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ನಾಮ ನಿರ್ದೇಶನ ಸದಸ್ಯರೂ ಆಗಿದ್ದರು.

