


ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕದಲ್ಲಿ ಯೋಗ ಕ್ರಿಯಾ
ವಿಭಾಗ ಆಶಾಕಿರಣದ ಉದ್ಘಾಟನಾ ಸಮಾರಂಭವು ಹಾಗೂ ಅಭಿನಂದನಾ ಕಾರ್ಯಕ್ರಮ ನ.5ರಂದು ಜರುಗಿತು. ಉದ್ಘಾಟನೆಯನ್ನು ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ ಗುರ್ಮೆರವರು ನೆರವೇರಿಸಿ, ನಾನು ಕೂಡ ಈ ಸೌಖ್ಯವನದಲ್ಲಿ ಸಾಧಕನಾಗಿ ಚಿಕಿತ್ಸೆ ಪಡೆದವನಾಗಿದ್ದು, ಪ್ರಕೃತಿ ಚಿಕಿತ್ಸಾ ಪದ್ಧತಿ ಮತ್ತು ಯೋಗಕ್ಕೆ ಪ್ರಪಂಚದಲ್ಲಿಯೇ ಹೆಚ್ಚು ಮಹತ್ವ ಬರುವಂತೆ ಮಾಡಿದವರು. ಡಿ. ವೀರೇಂದ್ರ ಹೆಗ್ಗಡೆಯವರು ಅವರ ದೂರದರ್ಶಿತ್ವದಿಂದ ಔಷಧಿ ರಹಿತವಾದ ಈ ಚಿಕಿತ್ಸೆಯಲ್ಲಿ ಇಂದು ಉದ್ಘಾಟಿಸಿದ ‘ಆಶಾಕಿರಣ’ ಎಂಬ ಯೋಗ ಕ್ರಿಯಾ ವಿಭಾಗವು ಅತ್ಯಂತ ಮಹತ್ವವನ್ನು ಪಡೆದುದಾಗಿದೆ ಎಂದು ತಿಳಿಸುತ್ತಾ ಎಲ್ಲರಿಗೂ ಶುಭ ಹಾರೈಸಿದರು.
ಸ್ಥಾನಿಕ ವೈದ್ಯಾಧಿಕಾರಿ ಡಾ. ಶೋಭಿತ್ ಶೆಟ್ಟಿಯವರು ಯೋಗ ಕ್ರೀಯೆಯ ಮಹತ್ವದ ಕುರಿತು ಮಾತನಾಡಿದರು. 2025ನೇ ಸಾಲಿನ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸೌಖ್ಯವನದ ಮುಖ್ಯ ವೈದ್ಯಾಧಿಕಾರಿ ಡಾ. ಗೋಪಾಲ ಪೂಜಾರಿಯವರಿಗೆ ಶಾಂತಿವನ ಟ್ರಸ್ಟ್ ಹಾಗೂ ಸೌಖ್ಯವನದ ವತಿಯಿಂದ ಅಭಿನಂದನಾ ಕಾರ್ಯಕ್ರಮವು ನಡೆಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಡಾ .ಗೋಪಾಲ್ ಪೂಜಾರಿಯವರು ಎಲ್ಲರಿಗೂ ಕೃತಜ್ಞತೆಯನ್ನು ಅರ್ಪಿಸಿದರು.


ಮುಖ್ಯ ಅತಿಥಿಗಳಾಗಿ ಉಡುಪಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಗಂಗಾಧರ್ ರಾವ್ ರವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಸಭಾಧ್ಯಕ್ಷತೆಯನ್ನು ವಹಿಸಿದ್ದ ಶಾಂತಿವನ ಟ್ರಸ್ಟ್ನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯರವರು ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶಾಂತಿವನ ಮತ್ತು ಸೌಖ್ಯವನ ಎರಡೂ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಗಳು ಯಶಸ್ವಿಯಾಗಿ ಮುನ್ನಡೆಯುತ್ತಿರುವುದು ಅತ್ಯಂತ ಸ್ತುತ್ಯರ್ಹ ಎಂದು ಬಣ್ಣಿಸಿದರು. ಸಂಸ್ಥೆಯಿಂದ ಶಾಸಕರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು, ಸಾಧಕರು ಮತ್ತು ಊರಿನವರು ಉಪಸ್ಥಿತರಿದ್ದರು. ಆಸ್ಪತ್ರೆಯ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಪ್ರಸ್ತಾಪಿಸಿ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ವೈದ್ಯೆ ಡಾ. ಪೂಜಾ ಜಿ. ರವರು ವಂದಾನಾರ್ಪಣೆ ಗೈದರು.









