ಧರ್ಮಸ್ಥಳ: ವಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಮೂರು ದಶಕಗಳಿಂದ ಅವಿರತ ಶ್ರಮಿಸುತ್ತಿರುವ ಮದ್ಯವರ್ಜನ ಶಿಬಿರದ ಪ್ರಯುಕ್ತ ದ್ವಿ ಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶವು ಅಮೃತವರ್ಷಣಿ ಸಭಾಭವನ ಶ್ರೀ ಕ್ಷೇತ್ರದಲ್ಲಿ ನ.6ರಂದು ನಡೆಯಿತು. ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷ ಶರಣಪ್ಪ ಸಲದಾಪುರ ಉದ್ಘಾಟಿಸಿ ಶುಭಕೋರಿದರು.
ಬೆಳಗಾವಿ ಹುಕ್ಕೇರಿ ಶ್ರೀಗುರು ಶಾಂತೇಶ್ವರ ಸಂಸ್ಥಾನ ಹಿರೇಮಠದ ಷ.ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿ ಆಶೀರ್ವಚನ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಮನ ಪರಿವರ್ತನೆಯಿಂದ ವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದರು.
ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವೀ. ಹೆಗ್ಗಡೆಯವರು ಜಾಗೃತಿಯ ನವಜೀವನ ಸಾಕ್ಷ್ಯಚಿತ್ರ ಬಿಡುಗಡೆಗೊಳಿಸಿಸಿದರು. ಮಾಣಿಲ ಕ್ಷೇತ್ರದ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು. ಬೆಂಗಳೂರು ಕ್ಷೇಮವನದ ಸಿಇಓ ಶ್ರದ್ದಾ ಅಮಿತ್, ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೆಂದ್ರ ಕುಮಾರ್, ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್., ಅಖಿಲಾ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ್ ಬಾದಾಮಿ, ನಿಕಟಪೂರ್ವ ರಾಜ್ಯಾಧ್ಯಕ್ಷ ರಾಜಣ್ಣ ಕೊರವಿ ಹಾಗೂ ಟ್ರಸ್ಟಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅಖಿಲಾ ಕರ್ನಾಟಕ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ಕಾಪಿನಡ್ಕ, ಮುಂಬೈ ಸಮಾಜ ಸೇವಕ ಆರ್.ಬಿ.ಹೆಬ್ಬಳ್ಳಿ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಾರ್ಯದರ್ಶಿ ವಿವೇಕ್ ವಿ. ಪ್ಯಾಸ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕೇಂದ್ರ ಕಚೇರಿಯ ಸಿಬ್ಬಂದಿಗಳಾದ ಸುಮಲತಾ, ಪ್ರಿಯ, ಸುಮಿತ್ರಾ ಪ್ರಾರ್ಥನೆಗೈದರು. ಯೋಜನಾಧಿಕಾರಿಗಳಾದ ಗಣೇಶ್ ಆಚಾರ್ಯ ಮತ್ತು ಭಾಸ್ಕರ ಎನ್. ನಿರೂಪಿಸಿದರು.

