ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಸುತ್ತಮುತ್ತ ನಡೆದಿರುವ ಅಸಹಜ ಸಾವು, ಅತ್ಯಾಚಾರ ಹಾಗೂ ಯುವತಿಯರ ನಾಪತ್ತೆ ಕುರಿತು ತನಿಖೆ ನಡೆಸುವಂತೆ ವಿಶೇಷ ತನಿಖಾ ರಾಜ್ಯ ಮಹಿಳಾ ಆಯೋಗ ಪತ್ರ ಬರೆದಿದೆ. ಎಸ್‌ಐಟಿ ತನಿಖೆಯು ಕೇವಲ ಚಿನ್ನಯ್ಯ ಎಂಬ ವ್ಯಕ್ತಿಯ ಹೇಳಿಕೆ ಹಾಗೂ ಮೃತದೇಹಗಳ ಉತ್ಪನಕ್ಕೆ ಸಂಬಂಧಿಸಿದಂತೆ ನಡೆಯುತ್ತಿದೆ. ಆದರೆ ಧರ್ಮಸ್ಥಳದಲ್ಲಿ ನಾಪತ್ತೆ, ಅಸಹಜ ಸಾವುಗಳ ಕುರಿತು ತನಿಖೆ ನಡೆಸಲು ಎಸ್‌ಐಟಿಗೆ ಸರಕಾರ ಆದೇಶಿಸಿತ್ತು. ಆದರೆ, ಈ ಮೂಲ ಉzಶ ಎಸ್‌ಐಟಿ ತನಿಖೆಯಿಂದಾಗುತ್ತಿಲ್ಲ ಎಂದು ಪರೋಕ್ಷವಾಗಿ ಆಯೋಗವು ಅಸಮಾಧಾನ ವ್ಯಕ್ತಪಡಿಸಿದೆ. ನಿಟ್ಟಿನಲ್ಲಿ ಸರಕಾರದ ಆದೇಶದಲ್ಲಿ ಮಹಿಳೆಯರು ಮತ್ತು ಯುವತಿಯರ ನಾಪತ್ತೆ, ಅತ್ಯಾಚಾರ, ಕೊಲೆ ಪ್ರಕರಣ ಸೇರಿದಂತೆ ಅಸಹಜ ಹಾಗೂ ಅನುಮಾನಾಸದ ಸಾವುಗಳ ಸಮಗ್ರ ತನಿಖೆ ನಡೆಸಬೇಕು. ಒಂದು ವೇಳೆ ಈಗಾಗಲೇ ತನಿಖೆ ನಡೆಯುತ್ತಿದ್ದರೆ ಆಯೋಗಕ್ಕೆ ಮಾಹಿತಿ ನೀಡಬೇಕು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
